ನವದೆಹಲಿ: ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಪಿಎಫ್‌ಆರ್‌ಡಿಎ) ಅಧ್ಯಕ್ಷರಾಗಿ ಎಸ್. ರಾಮನ್ ಅವರು ನೇಮಕವಾಗಿದ್ದಾರೆ.
ಹಾಲಿ ಅಧ್ಯಕ್ಷ ದೀಪಕ್ ಮೊಹಂತಿ ಅವರ ಅಧಿಕಾರಾವಧಿಯು ಮೇ ತಿಂಗಳಿಗೆ ಮುಕ್ತಾಯವಾಗಲಿದೆ. ಅವರಿಂದ ತೆರವಾಗುವ ಸ್ಥಾನಕ್ಕೆ ರಾಮನ್ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಅವರು ಡೆಪ್ಯುಟಿ ಸಿಎಜಿ ಆಗಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಹೊಸ ಅಧ್ಯಕ್ಷರ ಅಧಿಕಾರಾವಧಿಯು 5 ವರ್ಷ ಅಥವಾ ಅವರಿಗೆ 65 ವರ್ಷ ತುಂಬುವವರೆಗೆ ಇರಲಿದೆ. ಸಂಪುಟದ ನೇಮಕಾತಿಗಳ ಸಮಿತಿಯು ಈ ನೇಮಕಕ್ಕೆ ಅನುಮೋದನೆ ನೀಡಿದೆ. ರಾಮನ್ ಅವರು, 1991ರ ಬ್ಯಾಚ್‌ನ ಭಾರತೀಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ ಅಧಿಕಾರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.