ADVERTISEMENT

ಜವಳಿ: ₹ 19 ಸಾವಿರ ಕೋಟಿ ಮೊತ್ತದ ಹೂಡಿಕೆ ಪ್ರಸ್ತಾವಕ್ಕೆ ಒಪ್ಪಿಗೆ

ಪಿಟಿಐ
Published 14 ಏಪ್ರಿಲ್ 2022, 12:42 IST
Last Updated 14 ಏಪ್ರಿಲ್ 2022, 12:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಉತ್ಪಾದನೆ ಆಧಾರಿತ ಉತ್ತೇಜನ (ಪಿಎಲ್‌ಐ) ಯೋಜನೆಯ ಅಡಿಜವಳಿ ಕ್ಷೇತ್ರದಲ್ಲಿ ₹ 19 ಸಾವಿರ ಕೋಟಿ ಹೂಡಿಕೆಗೆ ಸಂಬಂಧಿಸಿದಂತೆ 61 ಅರ್ಜಿಗಳಿಗೆ ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ಜವಳಿ ಕಾರ್ಯದರ್ಶಿ ಯು.ಪಿ. ಸಿಂಗ್‌ ಗುರುವಾರ ತಿಳಿಸಿದ್ದಾರೆ.

ಪಿಎಲ್‌ಐ ಅಡಿ ಜವಳಿ ಕ್ಷೇತ್ರದಲ್ಲಿ ಹೂಡಿಕೆಗೆ ಒಟ್ಟಾರೆ 67 ಅರ್ಜಿಗಳು ಬಂದಿದ್ದವು ಎಂದು ಅವರು ಹೇಳಿದ್ದಾರೆ.

ಒಪ್ಪಿಗೆ ನೀಡಿರುವ ಅರ್ಜಿಗಳಿಂದ ₹ 19,077 ಕೋಟಿ ಹೂಡಿಕೆ ಆಗುವ ನಿರೀಕ್ಷೆ ಮಾಡಲಾಗಿದೆ. ವಹಿವಾಟು ಮೊತ್ತವು ₹ 1.84 ಲಕ್ಷ ಕೋಟಿ ಆಗುವ ಅಂದಾಜು ಇದೆ ಎಂದು ತಿಳಿಸಿದ್ದಾರೆ.

ADVERTISEMENT

ದೇಶದ ತಯಾರಿಕಾ ಸಾಮರ್ಥ್ಯ ವೃದ್ಧಿಸಲು ಮತ್ತು ರಫ್ತು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪಿಎಲ್‌ಐ ಯೋಜನೆ ಆರಂಭಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.