ನವದೆಹಲಿ: ಕುದುರೆಮುಖ ಕಬ್ಬಿಣ ಅದಿರು ಕಂಪನಿಯನ್ನು (ಕೆಐಒಸಿಎಲ್) ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದೊಟ್ಟಿಗೆ (ಎನ್‌ಎಂಡಿಸಿ) ವಿಲೀನಗೊಳಿಸುವ ಸಂಬಂಧ ಕೇಂದ್ರ ಸರ್ಕಾರವು ಪರಿಶೀಲನೆ ನಡೆಸುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬಿಣದ ಉಂಡೆಗಳ (ಪೆಲೆಟ್) ಉತ್ಪಾದನಾ ಕಂಪನಿಯಾದ ಕುದುರೆಮುಖ ಕಂಪನಿಯು ಪ್ರಸ್ತುತ ಆರ್ಥಿಕ ಸಂಕಷ್ಟದಲ್ಲಿದೆ. ಆದರೆ, ಕರ್ನಾಟಕ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಉಕ್ಕು ಸಚಿವಾಲಯದ ಅಡಿಯಲ್ಲಿ ಕೆಐಒಸಿಎಲ್ ಕಾರ್ಯ ನಿರ್ವಹಿಸುತ್ತಿದೆ. ವಾರ್ಷಿಕ 2.16 ಲಕ್ಷ ಟನ್ ಕಬ್ಬಿಣ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ಸರ್ಕಾರಿ ಸ್ವಾಮ್ಯದ ಎನ್‌ಎಂಡಿಸಿ ದೇಶದ ಶೇ 20ರಷ್ಟು ಕಬ್ಬಿಣದ ಅದಿರಿನ ಬೇಡಿಕೆಯನ್ನು ಪೂರೈಸುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.