ADVERTISEMENT

ಬ್ಯಾಂಕ್‌ಗಳಿಗೆ ಹೆಚ್ಚಿನ ಅಧಿಕಾರ

ಪಿಟಿಐ
Published 27 ಜನವರಿ 2019, 20:15 IST
Last Updated 27 ಜನವರಿ 2019, 20:15 IST
   

ನವದೆಹಲಿ: ಆರ್ಥಿಕ ಅಪರಾಧಿಗಳು ದೇಶ ಬಿಟ್ಟುಹೋಗದಂತೆ ತಡೆಯಲು ಕೇಂದ್ರ ಸರ್ಕಾರ ಬ್ಯಾಂಕ್‌ಗಳಿಗೆ ಹೆಚ್ಚಿನ ಅಧಿಕಾರ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರ್ಥಿಕ ಅಪರಾಧಿಗಳು, ಉದ್ದೇಶಪೂರ್ವಕ ಸುಸ್ತಿದಾರರ ವಿರುದ್ಧ ಲುಕ್‌ಔಟ್‌ ನೋಟಿಸ್‌ (ಎಲ್‌ಒಸಿ) ಹೊರಡಿಸುವಂತೆ ಗೃಹ ಸಚಿವಾಲಯ, ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕಸ್ಟಮ್ಸ್‌ ಮತ್ತು ಆದಾಯ ತೆರಿಗೆ ಇಲಾಖೆ, ಸಿಬಿಐ, ಸ್ಥಳೀಯ ಪಾಸ್‌ಪೋರ್ಟ್‌ ಅಧಿಕಾರಿಗಳು ಹಾಗೂ ಇನ್ನಿತರ ಸಂಬಂಧಿಸಿದ ಸಂಸ್ಥೆಗಳಿಗೆ ಬ್ಯಾಂಕ್‌ಗಳು ಮನವಿ ಮಾಡುವ ಅಧಿಕಾರವನ್ನು ನೀಡಲಾಗಿದೆ ಎಂದು ಗೃಹ ಸಚಿವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯ ಮಲ್ಯ, ನೀರವ್ ಮೋದಿ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.