ನವದೆಹಲಿ: ಆದಾಯ ತೆರಿಗೆ ವ್ಯಾಪ್ತಿಗೆ ಬರುವ ವ್ಯಕ್ತಿಗಳು 2020–21ನೇ ಸಾಲಿನ ಆದಾಯ ತೆರಿಗೆ ವಿವರ ಸಲ್ಲಿಸುವುದಕ್ಕೆ ಇದ್ದ ಕಡೆಯ ದಿನಾಂಕವನ್ನು ಕೇಂದ್ರ ಸರ್ಕಾರವು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. ಆದಾಯ ತೆರಿಗೆ ವಿವರ ಸಲ್ಲಿಸಲು ಕಂಪನಿಗಳಿಗೆ ಇರುವ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಣೆ ಮಾಡಲಾಗಿದೆ.
ಸಾಮಾನ್ಯವಾಗಿ, ವ್ಯಕ್ತಿಗಳು ಜುಲೈ 31ರೊಳಗೆ, ಕಂಪನಿಗಳು ಅಕ್ಟೋಬರ್ 31ರೊಳಗೆ ತಮ್ಮ ಆದಾಯ ತೆರಿಗೆ ವಿವರ ಸಲ್ಲಿಸಬೇಕು. ‘ಸಾಂಕ್ರಾಮಿಕವು ತೀವ್ರವಾಗಿರುವ ಕಾರಣ, ತೆರಿಗೆ ಪಾವತಿದಾರರ ಅನುಕೂಲಕ್ಕಾಗಿ ಈ ಗಡುವು ವಿಸ್ತರಿಸಲಾಗಿದೆ’ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ಹೇಳಿದೆ. ಉದ್ಯೋಗದಾತರು ಉದ್ಯೋಗಿಗಳಿಗೆ ಫಾರ್ಮ್–16 ನೀಡುವುದಕ್ಕೆ ಇರುವ ಗಡುವನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.