ADVERTISEMENT

ಕೋವಿಡ್-19‌: ಸಕ್ಕರೆ ರಫ್ತು ಗಡುವು ವಿಸ್ತರಣೆ

ಪಿಟಿಐ
Published 28 ಸೆಪ್ಟೆಂಬರ್ 2020, 15:16 IST
Last Updated 28 ಸೆಪ್ಟೆಂಬರ್ 2020, 15:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸಕ್ಕರೆ ಕಾರ್ಖಾನೆಗಳಿಗೆ ಸಕ್ಕರೆ ರಫ್ತು ಮಾಡಲು ನೀಡಿದ್ದ ಗಡುವನ್ನು ಮೂರು ತಿಂಗಳವರೆಗೆ ವಿಸ್ತರಿಸಿರುವುದಾಗಿ ಕೇಂದ್ರ ಆಹಾರ ಸಚಿವಾಲಯದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

‘2019–20ನೇ ಮಾರುಕಟ್ಟೆ ವರ್ಷದಲ್ಲಿ ಸೆಪ್ಟೆಂಬರ್‌ ಅಂತ್ಯದವರೆಗೆ 60 ಲಕ್ಷ ಟನ್‌ ಸಕ್ಕರೆ ರಫ್ತು ಮಾಡಲು ಸರ್ಕಾರ ಅವಕಾಶ ನೀಡಿತ್ತು. ಅದರಲ್ಲಿ 57 ಲಕ್ಷ ಟನ್‌ ರಫ್ತು ಮಾಡಲು ಗುತ್ತಿಗೆ‌ ಪಡೆಯಲಾಗಿದೆ’ ಎಂದು ಆಹಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಬೋಧ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

‘ಕೋವಿಡ್‌ ಸಂಬಂಧಿತ ನಿರ್ಬಂಧಗಳಿಂದಾಗಿ ಹಲವು ಕಾರ್ಖಾನೆಗಳಿಗೆ ರಫ್ತು ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಡಿಸೆಂಬರ್‌ವರೆಗೆ ಅವಕಾಶ ನೀಡಲಾಗಿದೆ’ ಎಂದಿದ್ದಾರೆ.

ADVERTISEMENT

ಹೆಚ್ಚುವರಿಯಾಗಿ ಇರುವ ಸಕ್ಕರೆ ದಾಸ್ತಾನು ಪ್ರಮಾಣವನ್ನು ತಗ್ಗಿಸಲು ಮತ್ತು ರೈತರಿಗೆ ಕಬ್ಬು ಬಾಕಿ ಪಾವತಿಸಲು ಸಕ್ಕರೆ ಕಾರ್ಖಾನೆಗಳಿಗೆ ಅನುಕೂಲ ಆಗುವಂತೆ 60 ಲಕ್ಷ ಟನ್‌ ಸಕ್ಕರೆ ರಫ್ತು ಮಾಡಲು ಕೇಂದ್ರ ಸರ್ಕಾರವು ₹ 6,268 ಕೋಟಿ ಸಬ್ಸಿಡಿ ನೀಡುತ್ತಿದೆ.

ಇರಾನ್‌, ಇಂಡೋನೇಷ್ಯಾ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕೆ ಸಕ್ಕರೆ ರಫ್ತು ಮಾಡಲಾಗುತ್ತಿದೆ.

ಅಂಕಿ–ಅಂಶ

2.73 ಕೋಟಿ ಟನ್‌ - 2019–20ರ ಮಾರುಕಟ್ಟೆ ವರ್ಷದಲ್ಲಿ ಸಕ್ಕರೆ ಉತ್ಪಾದನೆ ನಿರೀಕ್ಷೆ

2.5 –2.6 ಕೋಟಿ ಟನ್‌ - ದೇಶದ ವಾರ್ಷಿಕ ಬೇಡಿಕೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.