ನವದೆಹಲಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಅವರ ಅಧಿಕಾರಾವಧಿಯನ್ನು ಎರಡು ವರ್ಷದವರೆಗೆ ವಿಸ್ತರಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೇಮಕಾತಿ ಕುರಿತ ಸಂಪುಟ ಸಮಿತಿಯು (ಎಸಿಸಿ), ನಾಗೇಶ್ವರನ್ ಅವರ ಅಧಿಕಾರವನ್ನು 2027ರ ಮಾರ್ಚ್ 31ವರೆಗೆ ವಿಸ್ತರಿಸಲು ಅನುಮೋದನೆ ನೀಡಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.
2022ರ ಜನವರಿ 28ರಂದು ಮೂರು ವರ್ಷದ ಅವಧಿಗೆ ಅವರು ಮುಖ್ಯ ಆರ್ಥಿಕ ಸಲಹೆಗಾರರಾಗಿ ಅಧಿಕಾರ ಸ್ವೀಕರಿಸಿದ್ದರು.
ಸುಬ್ರಹ್ಮಣ್ಯಂ ಅಧಿಕಾರಾವಧಿ ವಿಸ್ತರಣೆ:
ನೀತಿ ಆಯೋಗದ ಸಿಇಒ ಬಿ.ವಿ.ಆರ್. ಸುಬ್ರಹ್ಮಣ್ಯಂ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರ ಒಂದು ವರ್ಷ ವಿಸ್ತರಿಸಿದೆ.
ಸುಬ್ರಹ್ಮಣ್ಯ ಅವರು 1987ರ ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿ. 2023ರ ಫೆಬ್ರುವರಿಯಲ್ಲಿ ನೀತಿ ಆಯೋಗದ ಸಿಇಒ ಆಗಿ ಎರಡು ವರ್ಷಕ್ಕೆ ನೇಮಕ ಆಗಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.