ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌ನ ಡೆಪ್ಯುಟಿ ಗವರ್ನರ್ ಟಿ. ರಬಿ ಶಂಕರ್ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ಒಂದು ವರ್ಷದವರೆಗೆ ವಿಸ್ತರಿಸಿದೆ ಎಂದು ಮೂಲಗಳು ತಿಳಿಸಿವೆ.
2026ರ ಮೇ ತಿಂಗಳವರೆಗೆ ಅಧಿಕಾರಾವಧಿ ವಿಸ್ತರಿಸಲಾಗಿದೆ. ಇದು ಎರಡನೇ ಬಾರಿಗೆ ಅಧಿಕಾರಾವಧಿಯನ್ನು ವಿಸ್ತರಿಸಿದಂತಾಗಿದೆ ಎಂದು ಹೇಳಿವೆ.
2021ರ ಮೇ ತಿಂಗಳಿನಲ್ಲಿ ಅವರನ್ನು ಸಂಪುಟದ ನೇಮಕಾತಿಗಳ ಸಮಿತಿಯು ಮೂರು ವರ್ಷದ ಅವಧಿಗೆ ಡೆಪ್ಯುಟಿ ಗವರ್ನರ್ ಆಗಿ ನೇಮಿಸಲು ಒಪ್ಪಿಗೆ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.