
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ನವದೆಹಲಿ: ಗ್ರಾಹಕರಿಗೆ ಅನಪೇಕ್ಷಿತ ಕರೆಗಳಿಂದ ಆಗುತ್ತಿರುವ ಕಿರಿಕಿರಿ ತಪ್ಪಿಸುವ ಸಂಬಂಧ ಕರಡು ಮಾರ್ಗಸೂಚಿ ರಚಿಸಲು ಸಮಿತಿಯೊಂದನ್ನು ರಚಿಸಲಾಗುವುದು ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.
ಇಂತಹ ಕರೆಗಳಿಂದ ಗ್ರಾಹಕರ ಖಾಸಗಿತನಕ್ಕೆ ತೊಂದರೆಯಾಗುತ್ತಿದೆ. ಹಾಗಾಗಿ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಈ ಸಮಿತಿಯಲ್ಲಿ ದೂರಸಂಪರ್ಕ ಇಲಾಖೆ, ಹಣಕಾಸು ಸೇವಾ ಇಲಾಖೆ, ಕೇಂದ್ರ ಗೃಹ ಮತ್ತು ನಗರ ಸಚಿವಾಲಯ, ಆರ್‌ಬಿಐ, ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಹಾಗೂ ಭಾರತದ ದೂರಸಂಪರ್ಕ ಸೇವಾದಾತರ ಸಂಘಟನೆಗಳ ಪ್ರತಿನಿಧಿಗಳು ಇರಲಿದ್ದಾರೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.