ADVERTISEMENT

ಇ–ಕಾಮರ್ಸ್‌ ಕಂಪನಿಗಳ ವಿರುದ್ಧ ದೂರು: ಗೋಯಲ್‌

ಪಿಟಿಐ
Published 17 ಮಾರ್ಚ್ 2021, 16:05 IST
Last Updated 17 ಮಾರ್ಚ್ 2021, 16:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೆಲವು ಇ–ಕಾಮರ್ಸ್‌ ಕಂಪನಿಗಳುವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ನಿಯಮ ಉಲ್ಲಂಘಿಸಿವೆ ಎಂಬ ದೂರುಗಳು ಬಂದಿದ್ದು, ಜಾರಿ ನಿರ್ದೇಶನಾಲಯದಿಂದ (ಇ.ಡಿ.) ತನಿಖೆ ನಡೆಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ಅವರು ಈ ಕುರಿತು ಲೋಕಸಭೆಗೆ ಬುಧವಾರ ಲಿಖಿತ ಉತ್ತರ ನೀಡಿದ್ದಾರೆ.

ಭಾರತದಲ್ಲಿ ದೊಡ್ಡ ಗಾತ್ರದ ಇ–ಕಾಮರ್ಸ್‌ ಕಂಪನಿಗಳ ವಹಿವಾಟಿಗೆ ನಿಷೇಧ ಹೇರುವ ಕುರಿತು ಅಖಿಲ ಭಾರತ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಿಂದ (ಎಐಸಿಸಿಐ) ಯಾವುದೇ ಮನವಿ ಬಂದಿಲ್ಲ ಎಂದು ಅವರು ಹೇಳಿದ್ದಾರೆ.

ADVERTISEMENT

2020ರ ಜನವರಿ–ಡಿಸೆಂಬರ್‌ ಅವಧಿಯಲ್ಲಿ ಭಾರತವು ಚೀನಾ, ಅಮೆರಿಕ, ಯುಎಇ, ಸೌದಿ ಅರೇಬಿಯಾ ಮತ್ತು ಇರಾಕ್‌ನಿಂದ ಸರಕುಗಳನ್ನು ಆಮದು ಮಾಡಿಕೊಂಡಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಹರ್‌ದೀಪ್‌ ಸಿಂಗ್‌ ಪುರಿ ಮಾಹಿತಿ ನೀಡಿದ್ದಾರೆ.

ಚೀನಾದಿಂದ ದೂರಸಂಪರ್ಕ ಸಾಧನಗಳು, ಕಂಪ್ಯೂಟರ್‌ ಹಾರ್ಡ್‌ವೇರ್‌ ಮತ್ತು ಬಿಡಿಭಾಗಗಳು, ರಸಗೊಬ್ಬರ, ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳು ಮತ್ತು ಉಪಕರಣಗಳು, ವಿದ್ಯುತ್ ಯಂತ್ರೋಪಕರಣಗಳನ್ನು ಆಮದು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.