ADVERTISEMENT

ಎಂಎಸ್‌ಎಂಇಗೆ ಸಾಲ ಸೌಲಭ್ಯ: ರಜನೀಶ್

ಪಿಟಿಐ
Published 31 ಮೇ 2025, 16:36 IST
Last Updated 31 ಮೇ 2025, 16:36 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ‘ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್‌ಎಂಇ) ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ. ಇದರಿಂದ ಈ ಉದ್ದಿಮೆಗಳಲ್ಲಿ ತಂತ್ರಜ್ಞಾನದ ಅಳವಡಿಕೆಗೆ ಸಹಕಾರಿಯಾಗಲಿದೆ’ ಎಂದು ಕೇಂದ್ರ ಎಂಎಸ್‌ಎಂಇ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ರಜನೀಶ್ ಹೇಳಿದ್ದಾರೆ.

ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ‘ಕೋವಿಡ್‌ ವೇಳೆ ಈ ವಲಯವು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಆ ನಂತರದ ವರ್ಷಗಳಲ್ಲಿ ವೇಗವಾಗಿ ಚೇತರಿಕೆ ಕಂಡಿತು’ ಎಂದರು.

ದೇಶದಲ್ಲಿ ಎಂಎಸ್‌ಎಂಇ ವಲಯವು 27 ಕೋಟಿ ಜನರಿಗೆ ಉದ್ಯೋಗ ನೀಡಿದೆ. ಹಾಗಾಗಿ, ಈ ವಲಯದ ಅಭಿವೃದ್ಧಿಗೆ ಪೂರಕವಾಗಿ ನೀತಿ ರೂಪಿಸಲು ಸಚಿವಾಲಯವು ಬದ್ಧವಾಗಿದೆ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.