ನವದೆಹಲಿ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ಪೂರೈಕೆ ಸರಪಳಿಯ ಬಲವರ್ಧನೆಗಾಗಿ ಕೇಂದ್ರ ಸರ್ಕಾರವು ಗುರುವಾರ ‘ಅನ್ನ ಚಕ್ರ’ ಯೋಜನೆಗೆ ಚಾಲನೆ ನೀಡಿದೆ.
ವಿಶ್ವ ಆಹಾರ ಕಾರ್ಯಕ್ರಮ ಮತ್ತು ಐಐಟಿ–ದೆಹಲಿ ಸಹಯೋಗದಡಿ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ.
ಆಹಾರ ಗೋದಾಮುಗಳಿಂದ ನ್ಯಾಯಬೆಲೆ ಅಂಗಡಿಗಳಿಗೆ ನಿಗದಿಪಡಿಸಿರುವ ಪ್ರಮಾಣದಷ್ಟು ಪಡಿತರದ ಹಂಚಿಕೆಗೆ ಈ ತಂತ್ರಜ್ಞಾನ ನೆರವಾಗಲಿದೆ. ಆಹಾರ ಧಾನ್ಯಗಳ ಸಾಗಣೆ ವ್ಯವಸ್ಥೆಯ ಸುಧಾರಣೆಗೆ ಸಹಕಾರಿಯಾಗಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಷಿ ತಿಳಿಸಿದ್ದಾರೆ.
ದೇಶದ 4.37 ನ್ಯಾಯಬೆಲೆ ಅಂಗಡಿಗಳು ಮತ್ತು 6,700 ಗೋದಾಮುಗಳ ನಡುವೆ ಸಂಪರ್ಕ ಬೆಸೆಯಲಿದೆ. ಈ ತಂತ್ರಜ್ಞಾನದ ಬಳಕೆಯಿಂದ ಸರ್ಕಾರಕ್ಕೆ ವಾರ್ಷಿಕ ₹250 ಕೋಟಿ ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.
ಎಸ್‌ಸಿಎಎನ್ ಪೋರ್ಟಲ್‌ಗೂ ಸಚಿವರು ಚಾಲನೆ ನೀಡಿದ್ದಾರೆ. ರಾಜ್ಯಗಳು ಆಹಾರ ಸಬ್ಸಿಡಿ ಪಡೆಯಲು ಈ ಪೋರ್ಟಲ್ ನೆರವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.