ನವದೆಹಲಿ: ಕೇಂದ್ರ ಸರ್ಕಾರವು ಕಡಲೆಕಾಳು ಆಮದು ಮೇಲೆ ಶೇ 10ರಷ್ಟು ಸುಂಕ ಹೆಚ್ಚಿಸಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.
ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆ ಹೆಚ್ಚಿಸಲು ಮತ್ತು ದರ ನಿಯಂತ್ರಣ ಉದ್ದೇಶದಿಂದ ಕಳೆದ ವರ್ಷದ ಮೇ ತಿಂಗಳಲ್ಲಿ ಸರ್ಕಾರವು ಆಮದು ಸುಂಕವನ್ನು ರದ್ದುಪಡಿಸಿತ್ತು. ಮಾರ್ಚ್ 31ಕ್ಕೆ ಈ ಆದೇಶ ಮುಕ್ತಾಯವಾಗಲಿದೆ. ಹಾಗಾಗಿ, ಸುಂಕ ಹೆಚ್ಚಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
2024–25ನೇ ಸಾಲಿನಡಿ 11.5 ದಶಲಕ್ಷ ಟನ್ ಕಡಲೆಕಾಳು ಉತ್ಪಾದನೆಯ ಗುರಿ ಹೊಂದಲಾಗಿದೆ. ಕಳೆದ ಆರ್ಥಿಕ ವರ್ಷದಲ್ಲಿ 11 ದಶಲಕ್ಷ ಟನ್ ಉತ್ಪಾದನೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.