ADVERTISEMENT

ಚಳಿಗಾಲದ ಅಧಿವೇಶನದಲ್ಲಿ ಎರಡು ಹಣಕಾಸು ಮಸೂದೆ ಮಂಡನೆ ಸಾಧ್ಯತೆ

ಪಿಟಿಐ
Published 24 ಅಕ್ಟೋಬರ್ 2021, 13:46 IST
Last Updated 24 ಅಕ್ಟೋಬರ್ 2021, 13:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೇಂದ್ರ ಸರ್ಕಾರವು ಹಣಕಾಸು ವಲಯಕ್ಕೆ ಸಂಬಂಧಿಸಿದ ಎರಡು ಪ್ರಮುಖ ಮಸೂದೆಗಳನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಬಜೆಟ್‌ನಲ್ಲಿ ಘೋಷಿಸಿರುವಂತೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಅವಕಾಶ ಕಲ್ಪಿಸುವ ಮಸೂದೆ ಸಹ ಇದರಲ್ಲಿ ಸೇರಿದೆ.

ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಿಂದ (ಪಿಎಫ್‌ಆರ್‌ಡಿಎ) ರಾಷ್ಟ್ರೀಯ ಪಿಂಚಣಿ ನಿಧಿಯನ್ನು (ಎನ್‌ಪಿಎಸ್‌) ಪ್ರತ್ಯೇಕಗೊಳಿಸುವ ಸಲುವಾಗಿ 2013ರ ಪಿಎಫ್‌ಆರ್‌ಡಿಎ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಸಹ ಮಂಡಿಸುವ ಸಾಧ್ಯತೆ ಇದೆ.

ಕೇಂದ್ರ ಸರ್ಕಾರವು ಸಂಸತ್‌ನ ಚಳಿಗಾಲದ ಅಧಿಕವೇಶನದಲ್ಲಿ 1949ರ ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ. ಇದಲ್ಲದೆ, ಬ್ಯಾಂಕಿಂಗ್‌ ಕಂಪನಿಗಳ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ 1970 ಹಾಗೂ 1980ಕ್ಕೆ ತಿದ್ದುಪಡಿ ತರುವ ಅಗತ್ಯ ಇದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಸರ್ಕಾರಿ ಸ್ವಾಮ್ಯದ ಎರಡು ಬ್ಯಾಂಕ್‌ಗಳು ಮತ್ತು ಒಂದು ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2021–22ನೇ ಸಾಲಿನ ಬಜೆಟ್‌ ಭಾಷಣದಲ್ಲಿ ಘೋಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.