ADVERTISEMENT

‘ಬ್ಯಾಂಕ್‌ ಠೇವಣಿ ವಿಮೆ ಹೆಚ್ಚಳಕ್ಕೆ ಕಾನೂನು’

ಪಿಟಿಐ
Published 16 ನವೆಂಬರ್ 2019, 19:45 IST
Last Updated 16 ನವೆಂಬರ್ 2019, 19:45 IST
   

ನವದೆಹಲಿ: ‘ಬ್ಯಾಂಕ್‌ಗಳಲ್ಲಿನ ಠೇವಣಿಗಳಿಗೆ ಸದ್ಯಕ್ಕೆ ಇರುವ ವಿಮೆ ಪರಿಹಾರ ಮೊತ್ತವನ್ನು ಹೆಚ್ಚಿಸಲು ಕಾನೂನು ಜಾರಿಗೆ ತರಲಾಗುವುದು’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್‌ ಮತ್ತು ಬ್ಯಾಂಕ್‌ಗಳು ದಿವಾಳಿ ಎದ್ದ ಅಥವಾ ಆರ್‌ಬಿಐ ಅವುಗಳ ಲೈಸನ್ಸ್‌ ರದ್ದುಪಡಿಸಿದ ಸಂದರ್ಭದಲ್ಲಿ ಬ್ಯಾಂಕ್‌ ಠೇವಣಿಗಳಿಗೆ ಸದ್ಯ, ₹ 1 ಲಕ್ಷ ವಿಮೆ ಪರಿಹಾರ ಇದೆ.

ವಿಮೆ ಹೆಚ್ಚಳ ಕುರಿತು, ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ (ಎಫ್‌ಆರ್‌ಡಿಐ) ಮಸೂದೆ ಮಂಡಿಸಲಾಗುವುದು’ ಎಂದು ಅವರು ಹೇಳಿದ್ದಾರೆ.ಠೇವಣಿ ವಿಮೆ ಪರಿಹಾರ ಮೊತ್ತವನ್ನು ಈ ಹಿಂದೆ 1993ರಲ್ಲಿ ₹ 30 ಸಾವಿರದಿಂದ ₹ 1 ಲಕ್ಷಕ್ಕೆ ಹೆಚ್ಚಿಸಲಾಗಿತ್ತು.

ADVERTISEMENT

ಪಂಜಾಬ್‌ ಮತ್ತು ಮಹಾರಾಷ್ಟ್ರ ಸಹಕಾರಿ (ಪಿಎಂಸಿ) ಬ್ಯಾಂಕ್‌ ಹಗರಣದಿಂದ ಠೇವಣಿದಾರರಿಗೆ ಸಮಸ್ಯೆಯಾಗುತ್ತಿದೆ. ಇದನ್ನು ಪರಿಗಣಿಸಿ ಮಾತನಾಡಿದ ಅವರು, ‘ಸಹಕಾರಿ ಬ್ಯಾಂಕ್‌ಗಳ ನಿಯಂತ್ರಣಕ್ಕೆ ಅವುಗಳನ್ನು ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ ವ್ಯಾಪ್ತಿಗೆ ತರಲಾಗುವುದು’ ಎಂದು ಹೇಳಿದ್ದಾರೆ.

‘ಸೋಮವಾರದಿಂದ ಆರಂಭವಾಗಲಿರುವ ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಈ ಸಂಬಂಧ ಒಪ್ಪಿಗೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.