ನವದೆಹಲಿ : ‘ಸಾರ್ವಜನಿಕ ವಲಯದ ಬ್ಯಾಂಕ್‌ಗಳ ವಿಲೀನದ ಪ್ರಸ್ತಾವ ಸರ್ಕಾರದ ಮುಂದಿಲ್ಲ’ ಎಂದು ಕೇಂದ್ರ ಸರ್ಕಾರವು ರಾಜ್ಯಸಭೆಗೆ ಮಂಗಳವಾರ ತಿಳಿಸಿದೆ.
ಈ ಬ್ಯಾಂಕ್‌ಗಳ ಆರ್ಥಿಕ ಸ್ಥಿತಿಯ ಸದೃಢತೆಗೆ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರ ಕೈಗೊಂಡಿರುವ ಸುಧಾರಣೆಗಳು ಸಕಾರಾತ್ಮಕವಾದ ಹಲವು ಬದಲಾವಣೆಗಳಿಗೆ ಕಾರಣವಾಗಿವೆ. ಇದರಿಂದ ಬ್ಯಾಂಕ್‌ನ ಸಮರ್ಪಕ ಬಂಡವಾಳ ಅನುಪಾತ (ಸಿಎಆರ್) ಮತ್ತು ವಸೂಲಾಗದ ಸಾಲದ ಪ್ರಮಾಣದಲ್ಲಿ ಸುಧಾರಣೆಯಾಗಿದೆ ಎಂದು ಚೌಧರಿ ಹೇಳಿದರು.
ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಅನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನೊಂದಿಗೆ ವಿಲೀನಗೊಳಿಸಲಾಯಿತು. ಕೆನರಾ ಬ್ಯಾಂಕ್ ಜೊತೆ ಸಿಂಡಿಕೇಟ್ ಬ್ಯಾಂಕ್, ಇಂಡಿಯನ್ ಬ್ಯಾಂಕ್ ಜೊತೆ ಅಲಹಾಬಾದ್ ಬ್ಯಾಂಕ್ ಹಾಗೂ ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಅನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ವಿಲೀನಗೊಳಿಸಲಾಯಿತು. ಇದು 2020ರ ಏಪ್ರಿಲ್ 1ರಿಂದ ಜಾರಿಗೆ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.