ನವದೆಹಲಿ: ಆದಾಯ ತೆರಿಗೆ ಇಲಾಖೆಯು 2020–21ನೇ ಹಣಕಾಸು ವರ್ಷಕ್ಕೆ ಐಟಿ ವಿವರ ಸಲ್ಲಿಕೆಯ ಅರ್ಜಿಗೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಗುರುವಾರ ತಿಳಿಸಿದೆ.
ತೆರಿಗೆದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ 2019–20ನೇ ಹಣಕಾಸು ವರ್ಷಕ್ಕೆ ಹೋಲಿಸಿದರೆ ಐಟಿಆರ್ ಅರ್ಜಿಯಲ್ಲಿ ಯಾವುದೇ ಮಹತ್ವದ ಬದಲಾವಣೆಗಳನ್ನು ಮಾಡಿಲ್ಲ. ಕೋವಿಡ್–19 ಸಾಂಕ್ರಾಮಿಕದ ಬಿಕ್ಕಟ್ಟನ್ನು ಗಮನದಲ್ಲಿ ಇಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.