ADVERTISEMENT

ಬಿಪಿಸಿಎಲ್ ಖಾಸಗೀಕರಣಕ್ಕೆ ಒಪ್ಪಿಗೆ

ಪಿಟಿಐ
Published 20 ನವೆಂಬರ್ 2019, 19:48 IST
Last Updated 20 ನವೆಂಬರ್ 2019, 19:48 IST
   

ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ. (ಬಿಪಿಸಿಎಲ್) ಸೇರಿದಂತೆ ಸಾರ್ವಜನಿಕ ವಲಯದ ಐದು ಕಂಪನಿಗಳ ಷೇರು ಮಾರಾಟ ಮಾಡಲು ಕೇಂದ್ರ ಸರ್ಕಾರ ಬುಧವಾರ ನಿರ್ಧರಿಸಿದೆ.ಬಿಪಿಸಿಎಲ್‌ನಲ್ಲಿ ಹೊಂದಿರುವ ಒಟ್ಟಾರೆ ಷೇರಿನಲ್ಲಿ ಶೇ 53.29ರಷ್ಟನ್ನು ಮಾರಾಟ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಸಿಐ), ಕಂಟೇನರ್ ಕಾರ್ಪೊರೇಷನ್ ಆಫ್ ಇಂಡಿಯಾ ಷೇರುಗಳನ್ನೂ ಸರ್ಕಾರ ಮಾರಾಟ ಮಾಡಲಿದೆ.

ಟಿಎಚ್‌ಡಿಸಿ ಇಂಡಿಯಾ ಮತ್ತು ನಾರ್ತ್‌ ಈಸ್ಟ್ ಎಲೆಕ್ಟ್ರಿಕ್ ಕಾರ್ಪೊರೇಷನ್‌ನ ಪಾಲನ್ನು ಸರ್ಕಾರಿ ಸ್ವಾಮ್ಯದ ಎನ್‌ಟಿಪಿಸಿಗೆ ನೀಡಲಿದೆ. ಸರ್ಕಾರದ ನಿಯಂತ್ರಣ ಉಳಿಸಿಕೊಂಡು ಆಯ್ದ ಕಂಪನಿಗಳ ಷೇರು ಪಾಲನ್ನು ಶೇ 51ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.