ನವದೆಹಲಿ: ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಈಚೆಗೆ ಜಾರಿಗೆ ತಂದಿರುವ ರಾಷ್ಟ್ರೀಯ ವಾಹನ ಗುಜರಿ ನೀತಿ ಅನ್ವಯ ಇನ್ನೂ ಹೆಚ್ಚಿನ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಕೇಂದ್ರ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.
ಕೇಂದ್ರ ಸರ್ಕಾರದ ಮಾನ್ಯತೆ ಪಡೆದಿರುವ ಮೊದಲ ಗುಜರಿ ಘಟಕ ಮಾರುತಿ ಸುಜುಕಿ ಟೊಯೊಟ್ಸು ಉದ್ಘಾಟನಾ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದರು. ‘ಹೊಸ ಗುಜರಿ ನೀತಿಯ ಅಡಿಯಲ್ಲಿ ಹೆಚ್ಚಿನ ತೆರಿಗೆ ವಿನಾಯಿತಿ ನೀಡುವುದು ಹೇಗೆ ಎಂಬ ಬಗ್ಗೆ ನಾನು ಹಣಕಾಸು ಸಚಿವಾಲಯದ ಜೊತೆ ಮಾತುಕತೆ ನಡೆಸಲಿದ್ದೇನೆ’ ಎಂದು ಗಡ್ಕರಿ ಹೇಳಿದರು.
ಹಳೆಯ ವಾಹನವನ್ನು ಗುಜರಿಗೆ ಹಾಕಿದ ನಂತರ ಖರೀದಿಸುವ ಹೊಸ ವಾಹನಕ್ಕೆ ರಸ್ತೆ ತೆರಿಗೆಯ ಮೇಲೆ ರಾಜ್ಯ ಸರ್ಕಾರಗಳು ಶೇಕಡ 25ರವರೆಗೆ ವಿನಾಯಿತಿ ನೀಡಲಿವೆ ಎಂದು ಗಡ್ಕರಿ ತಿಳಿಸಿದರು. ಹೆಚ್ಚಿನ ವಿನಾಯಿತಿ ನೀಡುವ ಬಗ್ಗೆ ಅಂತಿಮ ತೀರ್ಮಾನವನ್ನು ಹಣಕಾಸು ಸಚಿವಾಲಯ ಹಾಗೂ ಜಿಎಸ್‌ಟಿ ಮಂಡಳಿ ಕೈಗೊಳ್ಳಲಿವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.