ADVERTISEMENT

ನ್ಯಾಯಬೆಲೆ ಅಂಗಡಿ ಮೂಲಕ ಎಲ್‌ಪಿಜಿ ಮಾರಾಟ?

ಪಿಟಿಐ
Published 28 ಅಕ್ಟೋಬರ್ 2021, 2:52 IST
Last Updated 28 ಅಕ್ಟೋಬರ್ 2021, 2:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಜಾರಿಗೆ ತರುವ ಚಿಂತನೆ ಇದೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. ಅಲ್ಲದೆ, ನ್ಯಾಯಬೆಲೆ ಅಂಗಡಿಗಳ ಮೂಲಕ ಹಣಕಾಸು ಸೇವೆಗಳನ್ನು ಒದಗಿಸುವ ಆಲೋಚನೆಯೂ ಇದೆ ಎಂದಿದೆ.

ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ರಾಜ್ಯಗಳ ಜೊತೆ ನಡೆಸಿದ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಆಗಿದೆ. ಇಂಡಿಯನ್ ಆಯಿಲ್‌, ಭಾರತ್‌ ಪೆಟ್ರೋಲಿಯಂ ಹಾಗೂ ಹಿಂದುಸ್ತಾನ್ ಪೆಟ್ರೋಲಿಯಂ ಕಂಪನಿ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ತೈಲ ಮಾರಾಟ ಕಂಪನಿಗಳ ಪ್ರತಿನಿಧಿಗಳು ಸರ್ಕಾರದ ಆಲೋಚನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮಿಂದ ಸಾಧ್ಯವಾಗುವ ಎಲ್ಲ ಸಹಕಾರ ನೀಡಲಾಗುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT