ನವದೆಹಲಿ: ‘ದೇಶದ 92 ಕೋಟಿ ಜನರಿಗೆ ಸಾಮಾಜಿಕ ಭದ್ರತೆ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಅವರು, ಗುರುವಾರ ರಾಜ್ಯಸಭೆಗೆ ತಿಳಿಸಿದ್ದಾರೆ.
ದಶಕದ ಹಿಂದೆ ಶೇ 18ರಷ್ಟು ಜನರಿಗಷ್ಟೇ ಸಾಮಾಜಿಕ ಭದ್ರತೆ ಇತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಶೇ 48ರಷ್ಟು ಜನರಿಗೆ ಭದ್ರತೆ ಒದಗಿಸಿದೆ. ಸಾಮಾಜಿಕ ಭದ್ರತೆ ಪಡೆಯುವವರ ಪ್ರಮಾಣ ಶೇ 65ಕ್ಕೂ ಹೆಚ್ಚಿದೆ ಎಂದರು.
ದೇಶದ 80 ಕೋಟಿ ಜನರಿಗೆ ಆಹಾರ ಭದ್ರತೆ ಒದಗಿಸಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 60 ಕೋಟಿ ಜನರಿಗೆ ₹5 ಲಕ್ಷ ಮೌಲ್ಯದ ಆರೋಗ್ಯ ವಿಮಾ ಸೌಲಭ್ಯ ಒದಗಿಸಲಾಗಿದೆ. 70 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಗಿಗ್ ಕಾರ್ಮಿಕರನ್ನು ಈ ಯೋಜನೆ ವ್ಯಾಪ್ತಿಗೆ ತರಲಾಗಿದೆ. ದೇಶದ 92 ಕೋಟಿ ಜನರು ಒಂದು ಅಥವಾ ಒಂದಕ್ಕಿಂತ ಹೆಚ್ಚು ಸಾಮಾಜಿಕ ಭದ್ರತೆಯ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.