ನವದೆಹಲಿ: ‘ಆರ್ಥಿಕ ಚೇತರಿಕೆ ಮತ್ತು ಬೆಳವಣಿಗೆಗೆ ಅಗತ್ಯ ಇರುವ ಎಲ್ಲವನ್ನೂ ಮಾಡಲು ಸರ್ಕಾರ ಸಿದ್ಧವಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉದ್ಯಮವಲಯಕ್ಕೆ ಗುರುವಾರ ಭರವಸೆ ನೀಡಿದರು.
ಭಾರತೀಯ ವಾಣಿಜ್ಯೋದ್ಯಮ ಮಹಾಸಂಘದ (ಸಿಐಐ) ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ರಾಜ್ಯಗಳು ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿದ ಬಳಿಕ ಆರ್ಥಿಕತೆಯು ಚೇತರಿಸಿಕೊಳ್ಳಲು ಆರಂಭಿಸಿದೆ’ ಎಂದು ಹೇಳಿದರು.
‘ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಆರ್ಥಿಕ ಸುಧಾರಣೆಯ ಬದ್ಧತೆಯನ್ನು ತೋರಿಸಿದೆ.
‘ಪ್ರಸಕ್ತ ಹಣಕಾಸು ವರ್ಷದಲ್ಲಿ ಇಲ್ಲಿಯವರೆಗೆ ವಿದೇಶಿ ನೇರ ಬಂಡವಾಳ ಹೂಡಿಕೆಯು ಶೇ 37ರಷ್ಟು ಹೆಚ್ಚಾಗಿದೆ. ವಿದೇಶಿ ವಿನಿಯಮ ಮೀಸಲು ನಿಧಿಯು ಜುಲೈನಲ್ಲಿ ₹ 45.88 ಲಕ್ಷ ಕೋಟಿಗಳಿಗೆ ಏರಿಕೆ ಆಗಿದೆ’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.