ADVERTISEMENT

ನಿರೀಕ್ಷೆಗಿಂತ ಕಡಿಮೆ ತೆರಿಗೆ ಸಂಗ್ರಹ

ಪಿಟಿಐ
Published 19 ಸೆಪ್ಟೆಂಬರ್ 2019, 19:35 IST
Last Updated 19 ಸೆಪ್ಟೆಂಬರ್ 2019, 19:35 IST
   

ಮುಂಬೈ: ಪ್ರಸಕ್ತ ಹಣಕಾಸು ವರ್ಷದಲ್ಲಿಶೇ 17.5ರಷ್ಟು ಗರಿಷ್ಠ ತೆರಿಗೆ ಸಂಗ್ರಹಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಆದರೆ ಇದುವರೆಗೆ ಸಂಗ್ರಹವಾಗಿರುವ ತೆರಿಗೆಯಲ್ಲಿ ಶೇ 4ರಷ್ಟು ಮಾತ್ರವೇ ಹೆಚ್ಚಳವಾಗಿದೆ.

ಸೆಪ್ಟೆಂಬರ್‌ 17ರವರೆಗೆ ನೇರ ತೆರಿಗೆ ಮೂಲಕ ₹ 5.50 ಲಕ್ಷ ಕೋಟಿ ಸಂಗ್ರಹವಾಗಿದೆ. ಕಳೆದ ವರ್ಷ ₹5.25 ಲಕ್ಷ ಕೊಟಿ ಸಂಗ್ರಹವಾಗಿತ್ತು.

ಗ್ರಾಹಕರ ಖರೀದಿ ಸಾಮರ್ಥ್ಯ ಕಡಿಮೆಯಾಗುತ್ತಿರುವುದು ಹಾಗೂ ದೇಶದ ಒಟ್ಟಾರೆ ಆರ್ಥಿಕ ಬೆಳವಣಿಗೆ ಮಂದಗತಿಯಲ್ಲಿ ಇರುವುದರಿಂದಾಗಿ ತೆರಿಗೆ ಸಂಗ್ರಹದಲ್ಲಿಯೂ ನಿರೀಕ್ಷಿತ ಮಟ್ಟದ ಪ್ರಗತಿ ಸಾಧ್ಯವಾಗಿಲ್ಲ ಎಂದು ತೆರಿಗೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

ಏಪ್ರಿಲ್‌–ಸೆಪ್ಟೆಂಬರ್‌ ಅವಧಿಗೆ ಮುಂಗಡ ತೆರಿಗೆ ಸಂಗ್ರಹ ₹ 2.05 ಲಕ್ಷ ಕೋಟಿಯಿಂದ ₹ 2.20 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಾರ್ಪೊರೇಟ್‌ ತೆರಿಗೆಯ ಮುಂಗಡ ಪಾವತಿ ಶೇ 3.5ರಷ್ಟು ಏರಿಕೆಯಾಗಿದ್ದರೆ, ವೈಯಕ್ತಿಕ ತೆರಿಗೆಯ ಮುಂಗಡ ಪಾವತಿ ಶೇ 7.5ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

2018–19ನೇ ಹಣಕಾಸು ವರ್ಷದಲ್ಲಿ ನೇರ ತೆರಿಗೆಯಿಂದ ₹ 12 ಲಕ್ಷ ಕೋಟಿ ಸಂಗ್ರಹಿಸುವ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ ₹ 50 ಸಾವಿರ ಕೋಟಿಗಳಷ್ಟು ಕಡಿಮೆ ಸಂಗ್ರಹವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.