ನವದೆಹಲಿ: ದಿವಾಳಿ ಸಂಹಿತೆ (ಐಬಿಸಿ) ಅಡಿಯಲ್ಲಿ 40,943 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಲ್ಲಿ ₹10 ಲಕ್ಷ ಕೋಟಿ ಮೌಲ್ಯದ 28,818 ಅರ್ಜಿಗಳನ್ನು ವಿಚಾರಣೆಗೆ ಒಳಪಡುವ ಮೊದಲೇ ಬಗೆಹರಿಸಲಾಗಿದೆ ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಖಾತೆ ಸಚಿವ ಸಚಿವ ಹರ್ಷ ಮಲ್ಹೋತ್ರಾ ಲೋಕಸಭೆಗೆ ಸೋಮವಾರ ತಿಳಿಸಿದ್ದಾರೆ.
ವಿಶ್ವಬ್ಯಾಂಕ್ ವರದಿ ಪ್ರಕಾರ ದಿವಾಳಿತನವನ್ನು ಪರಿಹರಿಸುವಲ್ಲಿ ಭಾರತದ ಶ್ರೇಯಾಂಕ 2018ರಲ್ಲಿ 108 ಆಗಿತ್ತು. ಇದು 2019ರಲ್ಲಿ 52ನೇ ಸ್ಥಾನಕ್ಕೆ ಬಂದಿದೆ. ಇದು ದೊಡ್ಡ ಸಾಧನೆಯಾಗಿದೆ ಎಂದು ಹೇಳಿದ್ದಾರೆ.
ಅನುಕೂಲಕರ ವ್ಯಾಪಾರದ ವಾತಾವರಣ ಸೃಷ್ಟಿಸುವ ಗುರಿಯನ್ನು ಹೊಂದಿರುವ ಸುಲಲಿತ ಉದ್ದಿಮೆ ವಹಿವಾಟಿಗೆ (ಇಒಡಿಬಿ) ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. 2021ರ ಸೆಪ್ಟೆಂಬರ್‌ನಲ್ಲಿ ವಿಶ್ವಬ್ಯಾಂಕ್ ವ್ಯಾಪಾರ ವರದಿಯನ್ನು ಅನ್ನು ಪ್ರಕಟಿಸುವುದನ್ನು ನಿಲ್ಲಿಸಿತು. ಕೊನೆಯ ವರದಿ ಅಕ್ಟೋಬರ್ 2019ರಲ್ಲಿ ಬಿಡುಗಡೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.