ADVERTISEMENT

ಹಣದುಬ್ಬರ ನಿಯಂತ್ರಿಸಲು ಹಲವು ಕ್ರಮ: ಸಚಿವೆ ನಿರ್ಮಲಾ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 21:45 IST
Last Updated 20 ಫೆಬ್ರುವರಿ 2023, 21:45 IST
ನಿರ್ಮಲಾ ಸೀತಾರಾಮನ್‌ –ಪಿಟಿಐ ಚಿತ್ರ
ನಿರ್ಮಲಾ ಸೀತಾರಾಮನ್‌ –ಪಿಟಿಐ ಚಿತ್ರ   

ಜೈಪುರ: ಹಣದುಬ್ಬರವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಆ ಬಗ್ಗೆ ಗಮನ ಹರಿಸುವುದನ್ನು ಮುಂದುವರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸೋಮವಾರ ಹೇಳಿದ್ದಾರೆ.

2023–24ನೇ ಸಾಲಿನ ಬಜೆಟ್‌, ಹಣದುಬ್ಬರದ ಪ್ರಮಾಣವನ್ನು ಕಡಿಮೆ ಮಾಡಲಿದೆಯೇ ಎನ್ನುವ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಬೇಳೆಕಾಳು ವಿಷಯದಲ್ಲಿ, ದೇಶಿ ಉತ್ಪಾದನೆ ಹೆಚ್ಚಿಸಲು ಸರ್ಕಾರವು ರೈತರಿಗೆ ಉತ್ತೇಜನ ನೀಡುತ್ತಿದೆ. ಸ್ಥಳೀಯವಾಗಿ ಬೇಳೆಕಾಳುಗಳ ಲಭ್ಯತೆ ಸುಧಾರಿಸುವ ನಿಟ್ಟಿನಲ್ಲಿ ಆಮದು ಸುಂಕವನ್ನೂ ಕಡಿಮೆ ಮಾಡಲಾಗಿದೆ ಎಂದು
ತಿಳಿಸಿದ್ದಾರೆ.

ADVERTISEMENT

ಜನವರಿಯಲ್ಲಿ ಸಗಟು ಹಣದುಬ್ಬರವು ಎರಡು ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿಕೆ ಕಂಡಿದೆ. ಆದರೆ ಚಿಲ್ಲರೆ ಹಣದುಬ್ಬರವು ಜನವರಿಯಲ್ಲಿ ಶೇ 6.52ಕ್ಕೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.