
ಪಿಟಿಐ
ನವದೆಹಲಿ: ‘ಕೈಗಾರಿಕೆಗಳು ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಹೆಚ್ಚಿಸುವಂತೆ ಬೇಡಿಕೆ ಸಲ್ಲಿಸಿವೆ. ಈ ಕುರಿತು ಪರಿಶೀಲನೆ ನಡೆಸಲಾಗುವುದು’ ಎಂದು ಕೇಂದ್ರ ಆಹಾರ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ಪ್ರಸಕ್ತ ವರ್ಷದ ಸಕ್ಕರೆ ಮಾರುಕಟ್ಟೆ ವರ್ಷದಲ್ಲಿ (ನವೆಂಬರ್‌ನಿಂದ ಅಕ್ಟೋಬರ್) 15 ಲಕ್ಷ ಟನ್ ಸಕ್ಕರೆ ರಫ್ತಿಗೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
2019ರ ಫೆಬ್ರುವರಿಯಿಂದ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ₹31 ಇದೆ. ಉತ್ಪಾದನಾ ವೆಚ್ಚ ಹೆಚ್ಚಳವಾಗಿದೆ. ಹೀಗಾಗಿ ಬೆಲೆಯನ್ನು ₹40ಕ್ಕೆ ಹೆಚ್ಚಿಸುವಂತೆ ಭಾರತೀಯ ಸಕ್ಕರೆ ಮತ್ತು ಜೈವಿಕ ಇಂಧನ ತಯಾರಕರ ಒಕ್ಕೂಟ (ಐಎಸ್‌ಎಂಎ) ಸರ್ಕಾರಕ್ಕೆ ಮನವಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.