ADVERTISEMENT

ಬೀದಿ ಬದಿ ವ್ಯಾಪಾರಿಗಳಿಗೆ ಕಿರುಸಾಲ ನೀಡಲು ಗಮನ: ಕೇಂದ್ರ ಸಚಿವ ವೈಷ್ಣವ್

ಪಿಟಿಐ
Published 7 ಜನವರಿ 2023, 11:20 IST
Last Updated 7 ಜನವರಿ 2023, 11:20 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಬೀದಿ ಬದಿ ವ್ಯಾಪಾರಿಗಳಿಗೆ ₹ 3 ಸಾವಿರದಿಂದ ₹4 ಸಾವಿರದವರೆಗಿನ ಮೊತ್ತದ ಕಿರುಸಾಲ ನೀಡಲು ಈ ವರ್ಷ ಹೆಚ್ಚು ಗಮನ ಹರಿಸಲಾಗುವುದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಶನಿವಾರ ಹೇಳಿದ್ದಾರೆ.

ಡಿಜಿಟಲ್‌ ಇಂಡಿಯಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಜಿಟಲ್‌ ತಂತ್ರಜ್ಞಾನಗಳ ನೆರವಿನ ಮೂಲಕ ಕಿರು ಸಾಲ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕೋವಿಡ್‌ ಸಾಂಕ್ರಾಮಿಕದಿಂದ ನಷ್ಟಕ್ಕೆ ಒಳಗಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲು 2020ರ ಜೂನ್‌ನಲ್ಲಿ ಪಿಎಂ ಸ್ವಾನಿಧಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಯೋಜನೆಯಡಿ ಕಡಿಮೆ ಬಡ್ಡಿದರಕ್ಕೆ ಯಾವುದೇ ಆಧಾರ ಪಡೆಯದೇ ಸಾಲ ನೀಡಲಾಗುತ್ತದೆ.

ADVERTISEMENT

ದೇಶದ ಮೂಲೆ ಮೂಲೆಗೂ 4ಜಿ ಮತ್ತು 5ಜಿ ಸೇವೆಗಳನ್ನು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಅವರು ₹52 ಸಾವಿರ ಕೋಟಿ ನೀಡಿದ್ದಾರೆ. ಸ್ಥಳೀಯವಾಗಿ ಅಭಿವೃದ್ಧಿಪಡಿಸಿರುವ 4ಜಿ ಮತ್ತು 5ಜಿ ತಂತ್ರಜ್ಞಾನಗಳು ಈ ವರ್ಷ ಬಳಕೆಗೆ ಲಭ್ಯವಾಗಲಿವೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.