ADVERTISEMENT

ಅನಪೇಕ್ಷಿತ ಕರೆಗೆ ತಡೆ: ಜನವರಿಗೆ ಹೊಸ ಮಾರ್ಗಸೂಚಿ

ಪಿಟಿಐ
Published 24 ಡಿಸೆಂಬರ್ 2024, 13:29 IST
Last Updated 24 ಡಿಸೆಂಬರ್ 2024, 13:29 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ನವದೆಹಲಿ: ಗ್ರಾಹಕರಿಗೆ ಅನಪೇಕ್ಷಿತ ಕರೆಗಳು ಮತ್ತು ಸಂದೇಶಗಳಿಂದ ಆಗುತ್ತಿರುವ ತೊಂದರೆ ತಪ್ಪಿಸುವ ಬಗ್ಗೆ ಜನವರಿಯಲ್ಲಿ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ನಿಧಿ ಖರೆ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರಡು ನಿಯಮಾವಳಿಗಳನ್ನು ಸಿದ್ಧಪಡಿಸಲಾಗಿದೆ. ಇದನ್ನು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರದ (ಟ್ರಾಯ್‌) ನಿಯಮಾವಳಿಗಳೊಂದಿಗೆ ಸಮನ್ವಯಗಳಿಸಿದ ಬಳಿಕ ಅಧಿಕೃತವಾಗಿ ಪ್ರಕಟಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಟ್ರಾಯ್‌ ಅಧ್ಯಕ್ಷ ಅನಿಲ್‌ ಕುಮಾರ್‌ ಲಹೋಟಿ ಮಾತನಾಡಿ, ‘ಗ್ರಾಹಕ ಸಚಿವಾಲಯವು ರೂಪಿಸಿರುವ ಮಾರ್ಗಸೂಚಿಗಳು ದೂರಸಂಪರ್ಕ ಕಂಪನಿಗಳ ಪಾತ್ರ ಹಾಗೂ ಜವಾಬ್ದಾರಿಗೆ ಸೀಮಿತವಾಗಿವೆ. ಗ್ರಾಹಕರ ದೂರುಗಳ ಆಧಾರದ ಮೇಲೆ ಪ್ರಾಧಿಕಾರವು ಪ್ರತ್ಯೇಕವಾಗಿ ನಿಯಮಾವಳಿಗಳನ್ನು ರೂಪಿಸಲಿದೆ’ ಎಂದರು. 

ಗ್ರಾಹಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಹಾಲಿ ಇರುವ ನಿಯಮಾವಳಿಗಳನ್ನು ಮತ್ತಷ್ಟು ಸದೃಢಗೊಳಿಸಲು ಟ್ರಾಯ್‌ ನೇತೃತ್ವದಡಿ ಜಂಟಿ ಸಮಿತಿ ರಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.