ADVERTISEMENT

ಕಿರಿಕಿರಿ ಕರೆ: ಕಠಿಣ ಕ್ರಮ

ಪಿಟಿಐ
Published 15 ಫೆಬ್ರುವರಿ 2021, 16:49 IST
Last Updated 15 ಫೆಬ್ರುವರಿ 2021, 16:49 IST

ನವದೆಹಲಿ: ಕಿರಿಕಿರಿ ಉಂಟುಮಾಡುವ ದೂರವಾಣಿ ಕರೆಗಳ ಸಮಸ್ಯೆ ನಿವಾರಿಸಲು, ದೂರವಾಣಿ ಕರೆ ಹಾಗೂ ಎಸ್‌ಎಂಎಸ್‌ ಮೂಲಕ ನಡೆಸುವ ಹಣಕಾಸಿನ ವಂಚನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಉದ್ದೇಶದಿಂದ ದೂರಸಂಪರ್ಕ ಸಚಿವಾಲಯವು ಪ್ರತ್ಯೇಕ ವ್ಯವಸ್ಥೆಯೊಂದನ್ನು ರೂಪಿಸಲಿದೆ.

ದೂರಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ಅವರ ಸೂಚನೆ ಆಧರಿಸಿ ಈ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

‘ಟೆಲಿಮಾರ್ಕೆಟಿಂಗ್ ಕಂಪನಿಗಳು ತಪ್ಪು ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು, ದೂರಸಂಪರ್ಕ ಸೇವೆಗಳ ಗ್ರಾಹಕರಿಗೆ ಕಿರುಕುಳ ನೀಡುವವರ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು’ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.