ನವದೆಹಲಿ: ಆನ್ಲೈನ್ ಮೂಲಕ ದಿನಸಿ ವಸ್ತುಗಳನ್ನು ಪೂರೈಸುವ ಗ್ರೂಫರ್ಸ್ ಕಂಪನಿಯು ದೇಶದಾದ್ಯಂತ 5 ಸಾವಿರ ಜನರನ್ನು ನೇಮಿಸಿಕೊಳ್ಳಲು ಮುಂದಾಗಿದೆ.
ಲಾಕ್ಡೌನ್ನಿಂದಾಗಿ ದಿನಸಿ ವಸ್ತುಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಅದನ್ನು ಪೂರೈಸಲು ಈ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದೆ.
ಮೂರು ವಾರಗಳಲ್ಲಿ 15 ಲಕ್ಷಕ್ಕೂ ಅಧಿಕ ಜನರು ಗ್ರೂಫರ್ಸ್ ಆ್ಯಪ್ ಮೂಲಕ ಸರಕು ಖರೀದಿಸಲು ಮುಂದಾಗಿದ್ದಾರೆ. ಹೀಗೆ ಆರ್ಡರ್ ನೀಡುವ ಪ್ರತಿ 8 ಗ್ರಾಹಕರಲ್ಲಿಒಬ್ಬರಿಗೆ ಮಾತ್ರವೇ ಸೇವೆ ನೀಡಲು ಸಾಧ್ಯವಾಗುತ್ತಿದೆ. ಹೀಗಾಗಿ ಹೆಚ್ಚಿನ ಜನರಿಗೆ ಸೇವೆ ನೀಡಲು ನಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲಾಗುವುದು ಎಂದು ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.