ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮೂಲಕ 2023–24ನೇ ಹಣಕಾಸು ವರ್ಷದ ಜನವರಿಯಲ್ಲಿ ₹1.72 ಲಕ್ಷ ಕೋಟಿ ವರಮಾನ ಸಂಗ್ರಹವಾಗಿದೆ.
ಈ ಆರ್ಥಿಕ ವರ್ಷದ ತಿಂಗಳೊಂದರಲ್ಲಿ ಸಂಗ್ರಹವಾಗಿರುವ ಎರಡನೇ ಗರಿಷ್ಠ ಮೊತ್ತ ಇದಾಗಿದೆ.
ಕಳೆದ ಹಣಕಾಸು ವರ್ಷದ ಜನವರಿಯಲ್ಲಿ ಸಂಗ್ರಹವಾಗಿದ್ದ ಮೊತ್ತಕ್ಕೆ ಹೋಲಿಸಿದರೆ ಶೇ 10.4ರಷ್ಟು ಹೆಚ್ಚು ವರಮಾನ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಡಿಸೆಂಬರ್ನಲ್ಲಿ ₹1.65 ಲಕ್ಷ ಕೋಟಿ ಸಂಗ್ರಹವಾಗಿತ್ತು. 2023ರ ಏಪ್ರಿಲ್ನಿಂದ ಈ ವರ್ಷದ ಜನವರಿವರೆಗೆ ಜಿಎಸ್ಟಿ ಸಂಗ್ರಹವು ಶೇ 11.6ರಷ್ಟು ಏರಿಕೆಯಾಗಿದೆ. ಅಲ್ಲದೇ, ಈ ಹಣಕಾಸು ವರ್ಷದಲ್ಲಿ ಮೂರು ಬಾರಿ ₹1.70 ಲಕ್ಷ ಕೋಟಿಗೂ ಹೆಚ್ಚು ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.