ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮೂಲಕ 2023ನೇ ಹಣಕಾಸು ವರ್ಷದ ಡಿಸೆಂಬರ್ನಲ್ಲಿ ₹1.64 ಲಕ್ಷ ಕೋಟಿ ವರಮಾನ ಸಂಗ್ರಹವಾಗಿದೆ.
2022ನೇ ಆರ್ಥಿಕ ವರ್ಷದ ಡಿಸೆಂಬರ್ನಲ್ಲಿ ಸಂಗ್ರಹವಾಗಿದ್ದ ₹1.49 ಲಕ್ಷ ಕೋಟಿಗೆ ಹೋಲಿಸಿದರೆ, ಶೇ 10ರಷ್ಟು ಹೆಚ್ಚು ವರಮಾನ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
2023ರ ಏಪ್ರಿಲ್ನಿಂದ ಡಿಸೆಂಬರ್ವರೆಗೆ ₹14.97 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹವಾಗಿತ್ತು. ಒಟ್ಟು ಶೇ 12ರಷ್ಟು ಹೆಚ್ಚಳವಾಗಿತ್ತು. ಇದೇ ಅವಧಿಯಲ್ಲಿ ತಿಂಗಳ ಸರಾಸರಿ ಸಂಗ್ರಹವು ₹1.66 ಲಕ್ಷ ಕೋಟಿ ಇದೆ ಎಂದು ಹೇಳಿದೆ.
2022ರ ಏಪ್ರಿಲ್ನಿಂದ ಡಿಸೆಂಬರ್ವರೆಗೆ ₹13.40 ಲಕ್ಷ ಕೋಟಿ ಸಂಗ್ರಹವಾಗಿತ್ತು. ಅಲ್ಲದೇ, ಈ ಅವಧಿಯಲ್ಲಿ ಸರಾಸರಿ ಸಂಗ್ರಹ ₹1.49 ಲಕ್ಷ ಕೋಟಿ ಇತ್ತು ಎಂದು ವಿವರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.