ADVERTISEMENT

20ಕ್ಕೆ ಜಿಎಸ್‌ಟಿ ಮಂಡಳಿ ಸಭೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2019, 20:00 IST
Last Updated 13 ಸೆಪ್ಟೆಂಬರ್ 2019, 20:00 IST
   

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ಮಹತ್ವದ ಸಭೆಯು ಇದೇ 20ರಂದು ಗೋವಾದಲ್ಲಿ ನಡೆಯಲಿದೆ.

ಆರ್ಥಿಕತೆಯಲ್ಲಿನ ಹಿಂಜರಿತಕ್ಕೆ ಕಡಿವಾಣ ಹಾಕಲು ತೆರಿಗೆ ದರ ತಗ್ಗಿಸಬೇಕು ಎನ್ನುವ ಹಕ್ಕೊತ್ತಾಯ ವಿವಿಧ ವಲಯಗಳಿಂದ ಜೋರಾಗಿ ಕೇಳಿ ಬರುತ್ತಿದೆ. ಕಾರ್‌, ಬಿಸ್ಕಿಟ್‌ ಸೇರಿದಂತೆ ವಿವಿಧ ಉತ್ಪನ್ನಗಳ ಮೇಲೆ ಜಿಎಸ್‌ಟಿ ತಗ್ಗಿಸುವ ಬೇಡಿಕೆಯನ್ನು ಈ ಸಭೆಯಲ್ಲಿ ಚರ್ಚಿಸಿ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.

ತೆರಿಗೆ ಕಡಿತದ ನಿರ್ಧಾರವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವರಮಾನ ತಗ್ಗಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.