ADVERTISEMENT

17,818 ನಕಲಿ ಕಂಪನಿಗಳು ಪತ್ತೆ: ಕೇಂದ್ರ ಸರ್ಕಾರ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2024, 16:11 IST
Last Updated 9 ಡಿಸೆಂಬರ್ 2024, 16:11 IST
<div class="paragraphs"><p>ಲೋಕಸಭೆ ಅಧಿವೇಶನ</p></div>

ಲೋಕಸಭೆ ಅಧಿವೇಶನ

   

ಪ್ರಾತಿನಿಧಿಕ ಚಿತ್ರ

ನವದೆಹಲಿ: ದೇಶದಾದ್ಯಂತ ಜಿಎಸ್‌ಟಿ ನಕಲಿ ನೋಂದಣಿ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಅಕ್ಟೋಬರ್‌ ಅವಧಿಯಲ್ಲಿ 17,818 ನಕಲಿ ಕಂಪನಿಗಳನ್ನು ಪತ್ತೆ ಹಚ್ಚಲಾಗಿದೆ. ಒಟ್ಟು ₹35,132 ಕೋಟಿ ವಂಚನೆ ಬೆಳಕಿಗೆ ಬಂದಿದೆ. 69 ಜನರನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಸೋಮವಾರ ತಿಳಿಸಿದೆ.

ADVERTISEMENT

ನಕಲಿ ಕಂಪನಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್‌ ಚೌಧರಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ನಕಲಿ ಸಂಸ್ಥೆಗಳನ್ನು ಪತ್ತೆಹಚ್ಚಲು ವಿಶೇಷ ಕಾರ್ಯಾಚರಣೆಯು ಆಗಸ್ಟ್ 16 ರಿಂದ ಅಕ್ಟೋಬರ್‌ 30ರ ವರೆಗೆ ನಡೆದಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.