ADVERTISEMENT

ಜಿಎಸ್‌ಟಿ ವಂಚನೆ: ಮಹಾರಾಷ್ಟ್ರ, ಗುಜರಾತ್‌ನಲ್ಲಿ ಅಧಿಕ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 23:30 IST
Last Updated 5 ಫೆಬ್ರುವರಿ 2024, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ನವದೆಹಲಿ: ‘ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅಧಿಕಾರಿಗಳು 2023ರ ಏಪ್ರಿಲ್‌ನಿಂದ ಡಿಸೆಂಬರ್‌ವರೆಗೆ 14,597 ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಕೇಂದ್ರ ಸರ್ಕಾರವು, ಸೋಮವಾರ ಲೋಕಸಭೆಗೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಅತಿಹೆಚ್ಚು ವಂಚನೆ ಪ್ರಕರಣಗಳು ದಾಖಲಾಗಿವೆ. ಈ ರಾಜ್ಯದಲ್ಲಿ ಒಟ್ಟು 2,716 ಪ್ರಕರಣಗಳು ದಾಖಲಾಗಿವೆ. ಉಳಿದಂತೆ ಗುಜರಾತ್‌ 2,589, ಹರಿಯಾಣ 1,123 ಹಾಗೂ ಪಶ್ಚಿಮ ಬಂಗಾಳದಲ್ಲಿ 1,089 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ಅವರು, ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ADVERTISEMENT

ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಕಲಿ ಇನ್‌ವಾಯ್ಸ್‌ ಸೃಷ್ಟಿಸಿ ಜಿಎಸ್‌ಟಿ ಇನ್‌ಪುಟ್‌ ಟ್ಯಾಕ್ಸ್ ಕ್ರೆಡಿಟ್‌ (ಐಟಿಸಿ) ವಂಚನೆ ಎಸಗುತ್ತಿದ್ದ ಜಾಲ ಸಕ್ರಿಯವಾಗಿತ್ತು. ದತ್ತಾಂಶ ವಿಶ್ಲೇಷಣೆ ಮೂಲಕ ಕೃತಕ ಬುದ್ಧಿಮತ್ತೆ ಸಾಧನಗಳನ್ನು ಬಳಸಿಕೊಂಡು ಈ ಜಾಲದಲ್ಲಿ ಸಕ್ರಿಯರಾಗಿದ್ದ ತೆರಿಗೆದಾರರನ್ನು ಪತ್ತೆ ಹಚ್ಚುವಲ್ಲಿ ಜಿಎಸ್‌ಟಿ ಗುಪ್ತಚರ ಮಹಾನಿರ್ದೇಶನಾಲಯದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.