ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯವು ಜಿಎಸ್ಟಿ ಪರಿಹಾರ ರೂಪದಲ್ಲಿ (ಈ ವರ್ಷದ ಏಪ್ರಿಲ್ನಿಂದ ಜೂನ್ ವರೆಗಿನ ಬಾಕಿ ಮೊತ್ತ) ಕರ್ನಾಟಕ ಸರ್ಕಾರಕ್ಕೆ ₹1,915 ಕೋಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.
ವಿವಿಧ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಒಟ್ಟು ಮೊತ್ತ ₹17 ಸಾವಿರ ಕೋಟಿ. ಪರಿಹಾರ ಮೊತ್ತದಲ್ಲಿ ವಿವಿಧ ರಾಜ್ಯಗಳಿಗೆ ಈ ವರ್ಷ ಬಿಡುಗಡೆ ಮಾಡಿರುವ ಒಟ್ಟು ಮೊತ್ತ ₹1,15,662 ಕೋಟಿ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.