ADVERTISEMENT

ಜಿಎಸ್‌ಟಿ ರಿಟರ್ನ್ ಸಲ್ಲಿಕೆ ಸೆಪ್ಟೆಂಬರ್‌ವರೆಗೆ ವಿಸ್ತರಣೆ

ಪಿಟಿಐ
Published 6 ಮೇ 2020, 21:02 IST
Last Updated 6 ಮೇ 2020, 21:02 IST
   

ನವದೆಹಲಿ: 2018–19ನೇ ಹಣಕಾಸು ವರ್ಷಕ್ಕೆ ಜಿಎಸ್‌ಟಿಯ ವಾರ್ಷಿಕ ರಿಟರ್ನ್ಸ್‌ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್‌ವರೆಗೆ ವಿಸ್ತರಿಸಲಾಗಿದೆ.

ಲಾಕ್‌ಡೌನ್‌ ವಿಸ್ತರಣೆ ಆಗಿರುವುದರಿಂದ ಉದ್ದಿಮೆಗಳಿಗೆ ಅನುಕೂಲ ಮಾಡಿಕೊಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಾರ್ಚ್‌ 24ರಂದು ಅಥವಾ ಅದಕ್ಕೂ ಮೊದಲು ಸೃಷ್ಟಿಸಿರುವ, ಮಾರ್ಚ್‌ 20 ರಿಂದ ಏಪ್ರಿಲ್‌ 15ರವರೆಗೆ ಮುಕ್ತಾಯವಾಗಲಿದ್ದ ಇ–ವೇ ಬಿಲ್‌ಗಳ ಅವಧಿಯನ್ನೂ ಮೇ 31ರವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮತ್ತು ಕಸ್ಟಮ್ಸ್‌ ಮಂಡಳಿ (ಸಿಬಿಐಸಿ) ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.