ನವದೆಹಲಿ: ಕರ್ನಾಟಕದಲ್ಲಿ ಮಾರ್ಚ್ ತಿಂಗಳಿನಲ್ಲಿ ₹10,360 ಕೋಟಿ ಜಿಎಸ್ಟಿ ಸಂಗ್ರಹವಾಗಿದೆ.
ಕಳೆದ ವರ್ಷ ಮಾರ್ಚ್ನಲ್ಲಿ ₹8,750 ಕೋಟಿ ಸಂಗ್ರಹವಾಗಿತ್ತು. ಈ ವರ್ಷದ ಮಾರ್ಚ್ನಲ್ಲಿ ಜಿಎಸ್ಟಿ ಸಂಗ್ರಹ ಪ್ರಮಾಣ ಶೇ 18ರಷ್ಟು ಹೆಚ್ಚಳ ಆಗಿದೆ.
2022–23ನೇ ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿ ₹1,18,320 ಕೋಟಿ ಜಿಎಸ್ಟಿ ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಜಿಎಸ್ಟಿ ಸಂಗ್ರಹದಲ್ಲಿ ರಾಜ್ಯವು ಶೇಕಡ 30ರಷ್ಟು ಪ್ರಗತಿ ಸಾಧಿಸಿದೆ. ಅಕ್ಟೋಬರ್ ತಿಂಗಳಿನಿಂದ ಪ್ರತಿ ತಿಂಗಳು ಜಿಎಸ್ಟಿ ಸಂಗ್ರಹ ಪ್ರಮಾಣ ₹10 ಸಾವಿರ ಕೋಟಿ ದಾಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.