ADVERTISEMENT

ಷೇರು ಮಾರುಕಟ್ಟೆ ವಂಚನೆ ಆರೋಪ: ಬುಚ್‌ ತಡೆಯಾಜ್ಞೆ ವಿಸ್ತರಣೆ

ಪಿಟಿಐ
Published 1 ಏಪ್ರಿಲ್ 2025, 14:47 IST
Last Updated 1 ಏಪ್ರಿಲ್ 2025, 14:47 IST
ಮಾಧವಿ ಪುರಿ ಬುಚ್‌
ಮಾಧವಿ ಪುರಿ ಬುಚ್‌   

ಮುಂಬೈ: ಷೇರು ಮಾರುಕಟ್ಟೆ ವಂಚನೆ ಆರೋಪದ ಮೇಲೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಮಾಜಿ ಅಧ್ಯಕ್ಷೆ ಮಾಧವಿ ಪುರಿ ಬುಚ್‌ ಮತ್ತು ಐದು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮುಂಬೈನ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶದ ಮೇಲಿನ ಮಧ್ಯಂತರ ತಡೆಯಾಜ್ಞೆಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ವಿಸ್ತರಿಸಿದೆ.

ಪ್ರಕರಣದ ಮೂಲ ದೂರುದಾರರು ಅಫಿಡವಿಟ್‌ ಸಲ್ಲಿಸಿದ್ದಾರೆ. ಬುಚ್ ಮತ್ತು ಇತರರಿಗೆ ಅದನ್ನು ಪರಿಶೀಲಿಸಲು ಸಮಯ ನೀಡಲಾಗಿದೆ. ಮುಂದಿನ ಆದೇಶದವರೆಗೂ ಮಧ್ಯಂತರ ತಡೆಯಾಜ್ಞೆ ಮುಂದುವರಿಯಲಿದೆ ಎಂದು ನ್ಯಾಯಾಧೀಶ ಶಿವಕುಮಾರ್ ಹೇಳಿದರು. ಮೇ 7ರಂದು ಮುಂದಿನ ವಿಚಾರಣೆ ನಡೆಯಲಿದೆ.

ಷೇರುಪೇಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ನ್ಯಾಯಾಲಯವು ಎಫ್‌ಐಆರ್‌ ದಾಖಲಿಸುವಂತೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಬುಚ್‌ ಹಾಗೂ ಅಧಿಕಾರಿಗಳು ಹೈಕೋರ್ಟ್‌ನ ಮೆಟ್ಟಿಲೇರಿದ್ದರು. ನಾಲ್ಕು ವಾರದವರೆಗೆ ಎಫ್‌ಐಆರ್‌ ದಾಖಲಿಸದಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕಳೆದ ತಿಂಗಳು ಬಾಂಬೆ ಹೈಕೋರ್ಟ್‌ ಸೂಚಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.