ADVERTISEMENT

ಎಚ್‌ಸಿಎಲ್‌ ಲಾಭ ಶೇ 31ರಷ್ಟು ಹೆಚ್ಚಳ

ಪಿಟಿಐ
Published 15 ಜನವರಿ 2021, 11:27 IST
Last Updated 15 ಜನವರಿ 2021, 11:27 IST

ನವದೆಹಲಿ: ಡಿಸೆಂಬರ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಎಚ್‌ಸಿಎಲ್‌ ಟೆಕ್ನಾಲಜೀಸ್ ಕಂಪನಿಯ ನಿವ್ವಳ ಲಾಭದಲ್ಲಿ ಶೇಕಡ 31.1ರಷ್ಟು ಹೆಚ್ಚಳ ಆಗಿದೆ. ಈ ತ್ರೈಮಾಸಿಕದಲ್ಲಿ ಕಂಪನಿಯು ₹ 3,982 ಕೋಟಿ ನಿವ್ವಳ ಲಾಭ ಗಳಿಸಿದೆ.

ಐ.ಟಿ. ಸೇವಾ ಕಂಪನಿಯಾದ ಎಚ್‌ಸಿಎಲ್‌ ಟೆಕ್ನಾಲಜೀಸ್, ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 3,037 ಕೋಟಿ ಲಾಭ ಗಳಿಸಿತ್ತು. ಕಂಪನಿಯು 2020ರ ಕ್ಯಾಲೆಂಡರ್ ವರ್ಷದಲ್ಲಿ ₹ 73 ಸಾವಿರ ಕೋಟಿಗಿಂತ ಹೆಚ್ಚಿನ ಆದಾಯ ಗಳಿಸಿದ ಹೆಗ್ಗಳಿಕೆಯನ್ನೂ ಸಂ‍ಪಾದಿಸಿದೆ. ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯ ಆದಾಯದಲ್ಲಿ ಶೇ 3.5ರಷ್ಟು ಹೆಚ್ಚಳ ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT