ADVERTISEMENT

ಎಚ್‌ಸಿಎಲ್‌ ಟೆಕ್ನಾಲಜೀಸ್‌ಗೆ ₹4,591 ಕೋಟಿ ಲಾಭ

ಪಿಟಿಐ
Published 13 ಜನವರಿ 2025, 15:31 IST
Last Updated 13 ಜನವರಿ 2025, 15:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: 2024–25ರ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಐ.ಟಿ ಸೇವಾ ಕಂಪನಿ ಎಚ್‌ಸಿಎಲ್‌ ಟೆಕ್ನಾಲಜೀಸ್‌ ₹4,591 ಕೋಟಿ ನಿವ್ವಳ ಲಾಭ ಗಳಿಸಿದೆ.

2023–24ರ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹4,350 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 5.5ರಷ್ಟು ಏರಿಕೆಯಾಗಿದೆ ಎಂದು ಕಂಪನಿ ಷೇರುಪೇಟೆಗೆ ಸೋಮವಾರ ತಿಳಿಸಿದೆ.

ವರಮಾನದಲ್ಲಿ ಶೇ 5ರಷ್ಟು ಏರಿಕೆಯಾಗಿದ್ದು, ₹29,890 ಕೋಟಿ ಗಳಿಸಲಾಗಿದೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.