ನವದೆಹಲಿ: ಎಚ್‌ಡಿಎಫ್‌ಸಿ ಲಿಮಿಟೆಡ್ ಸಾಲದ ಬಡ್ಡಿ ದರ ಹೆಚ್ಚಿಸಿದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ರೆಪೊ ದರ ಆಧಾರಿತ ಸಾಲದ ಬಡ್ಡಿ ದರವನ್ನು ಜಾಸ್ತಿ ಮಾಡಿದೆ.
ಎಚ್‌ಡಿಎಫ್‌ಸಿ ಲಿಮಿಟೆಡ್ ತನ್ನ ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಶೇ 0.50ರಷ್ಟು ಜಾಸ್ತಿ ಮಾಡಿದೆ. ಇದು ಶುಕ್ರವಾರದಿಂದ ಜಾರಿಗೆ ಬರಲಿದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ ಶುಕ್ರವಾರದಿಂದ ಅನ್ವಯವಾಗುವಂತೆ ಬಡ್ಡಿ ದರವನ್ನು ಶೇ 0.50ರಷ್ಟು ಜಾಸ್ತಿ ಮಾಡಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್, ಇಂಡಿಯನ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಇಂಡಿಯಾ ತಮ್ಮ ರೆಪೊ ಆಧಾರಿತ ಸಾಲದ ಬಡ್ಡಿ ದರವನ್ನು ಶೇ 0.50ರಷ್ಟು ಜಾಸ್ತಿ ಮಾಡುವುದಾಗಿ ಪ್ರಕಟಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.