ಬೆಂಗಳೂರು: ನಗರದ ಲ್ಯಾಂಗ್‌ಫೋರ್ಡ್ ಟೌನ್‌ನ ಗ್ಲೋಬಲ್ ಟೆಕ್ ಪಾರ್ಕ್ ಕಟ್ಟಡದಲ್ಲಿನ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಆಧುನಿಕ ಶಾಖೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಚೆಗೆ ಉದ್ಘಾಟಿಸಿದರು.
ಎಚ್‌ಡಿಎಫ್‌ಸಿ ಬ್ಯಾಂಕ್‌ನ ಕರ್ನಾಟಕ ಮತ್ತು ಕೇರಳ ವಿಭಾಗದ ಶಾಖಾ ಬ್ಯಾಂಕಿಂಗ್ ಮುಖ್ಯಸ್ಥ ಅಹ್ಮದ್ ಝಕಾರಿಯಾ ಉಪಸ್ಥಿತರಿದ್ದರು. ಇದೇ ಸಮಯದಲ್ಲಿ ಶಿವಕುಮಾರ್ ಅವರು, ಎಚ್‌ಡಿಎಫ್‌ಸಿ ಬ್ಯಾಂಕ್‌ನ ವಾರ್ಷಿಕ ಫೆಸ್ಟಿವ್ ಟ್ರೀಟ್ಸ್ ಅಭಿಯಾನಕ್ಕೆ ಚಾಲನೆ ನೀಡಿದರು ಎಂದು ಪ್ರಕಟಣೆ ತಿಳಿಸಿದೆ.
ಈ ಅಭಿಯಾನದಲ್ಲಿ ಕಾರ್ಡ್, ಸಾಲ, ಇಎಂಐ ಮೂಲಕ ಹಲವು ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಅದು ಹೇಳಿದೆ.
ಎಚ್‌ಡಿಎಫ್‌ಸಿ ಬ್ಯಾಂಕ್ ಕರ್ನಾಟಕದಲ್ಲಿನ ತನ್ನ 528 ಶಾಖೆಗಳು, 1156 ಎಟಿಎಂಗಳು, ಡಿಜಿಟಲ್ ವೇದಿಕೆಗಳು ಮತ್ತು 1 ಲಕ್ಷಕ್ಕೂ ಹೆಚ್ಚು ವ್ಯಾಪಾರಿಗಳ ಜಾಲವನ್ನು ಈ ಅಭಿಯಾನಕ್ಕಾಗಿ ಬಳಸಿಕೊಳ್ಳಲಿದೆ.
ಉದ್ಘಾಟನಾ ಸಮಾರಂಭದಲ್ಲಿ ನಗರಾಭಿವೃದ್ಧಿ ಮತ್ತು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.