ADVERTISEMENT

ಎಚ್‌ಡಿಎಫ್‌ಸಿ ಬ್ಯಾಂಕ್‌ ಲಾಭ ಶೇ 18ರಷ್ಟು ಹೆಚ್ಚಳ

ಪಿಟಿಐ
Published 15 ಜನವರಿ 2022, 10:23 IST
Last Updated 15 ಜನವರಿ 2022, 10:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್‌ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹ 10,342 ಕೋಟಿಗಳಷ್ಟಾಗಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಆಗಿದ್ದ ₹ 8,758 ಕೋಟಿಗೆ ಹೋಲಿಸಿದರೆ ಈ ಬಾರಿ ಲಾಭದಲ್ಲಿ ಶೇ 18.1ರಷ್ಟು ಏರಿಕೆ ಕಂಡುಬಂದಿದೆ.

ವರಮಾನವು ₹ 37,522 ಕೋಟಿಗಳಿಂದ ₹ 40,651 ಕೋಟಿಗಳಿಗೆ ಏರಿಕೆ ಆಗಿದೆ ಎಂದು ಷೇರುಪೇಟೆಗೆ ಶನಿವಾರ ಮಾಹಿತಿ ನೀಡಿದೆ.

ADVERTISEMENT

ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣವು ಶೇ 0.81 ರಿಂದ ಶೇ 1.26ಕ್ಕೆ ಏರಿಕೆ ಆಗಿದೆ. ನಿವ್ವಳ ಎನ್‌ಪಿಎ ಶೇ 0.09ರಿಂದ ಶೇ 0.37ಕ್ಕೆ ಏರಿಕೆ ಆಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.