ADVERTISEMENT

ಎಚ್‌ಡಿಎಫ್‌ಸಿ ಬ್ಯಾಂಕ್‌ ನಿವ್ವಳ ಲಾಭ ಶೇ 21ರಷ್ಟು ಹೆಚ್ಚಳ

ಪಿಟಿಐ
Published 16 ಜುಲೈ 2022, 10:04 IST
Last Updated 16 ಜುಲೈ 2022, 10:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್‌ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಶೇ 21ರಷ್ಟು ಹೆಚ್ಚಾಗಿದ್ದು, ₹ 9,579 ಕೋಟಿಗೆ ಏರಿಕೆ ಆಗಿದೆ.

ಒಟ್ಟು ವರಮಾನ ₹ 36,771 ಕೋಟಿಯಿಂದ ₹ 41,560 ಕೋಟಿಗೆ ಏರಿಕೆ ಆಗಿದೆ ಎಂದು ಬ್ಯಾಂಕ್‌ ಷೇರುಪೇಟೆಗೆ ಮಾಹಿತಿ ನೀಡಿದೆ.

ಒಟ್ಟಾರೆ ವೆಚ್ಚವು ₹ 21,634 ಕೋಟಿಯಿಂದ ₹ 26,192 ಕೋಟಿಗೆ ಏರಿಕೆ ಆಗಿದೆ. ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ಹಿಂದಿನ ಹಣಕಾಸು ವರ್ಷದ ಜೂನ್‌ ತ್ರೈಮಾಸಿಕದಲ್ಲಿ ₹ 4,830 ಕೋಟಿ ಇದ್ದಿದ್ದು ಪ್ರಸಕ್ತ ಹಣಕಾಸು ವರ್ಷದ ಜೂನ್‌ ತ್ರೈಮಾಸಿಕದಲ್ಲಿ ₹ 3,188 ಕೋಟಿಗೆ ಇಳಿಕೆ ಆಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.