ನವದೆಹಲಿ: ಖಾಸಗಿ ವಲಯದ ಎಚ್ಡಿಎಫ್ಸಿ ಬ್ಯಾಂಕ್ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಶೇ 18ರಷ್ಟು ಹೆಚ್ಚಾಗಿದ್ದು ₹ 9,096 ಕೋಟಿಗಳಿಗೆ ತಲುಪಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ನ ನಿವ್ವಳ ಲಾಭ ₹ 7,703 ಕೋಟಿಗಳಷ್ಟಿತ್ತು.
ತ್ರೈಮಾಸಿಕದಲ್ಲಿ ಒಟ್ಟು ವರಮಾನವು ₹ ₹ 38,438 ಕೋಟಿಗಳಿಂದ ₹ 41,436 ಕೋಟಿಗಳಿಗೆ ಏರಿಕೆ ಆಗಿದೆ ಎಂದು ಬ್ಯಾಂಕ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.