ADVERTISEMENT

ಎಚ್‌ಡಿಎಫ್‌ಸಿ ಬ್ಯಾಂಕ್‌ ನಿವ್ವಳ ಲಾಭ ₹ 8,760 ಕೋಟಿ

ಪಿಟಿಐ
Published 16 ಜನವರಿ 2021, 12:58 IST
Last Updated 16 ಜನವರಿ 2021, 12:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್‌ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ಶೇ 14.36ರಷ್ಟು ಹೆಚ್ಚಾಗಿದ್ದು, ₹ 8,760 ಕೋಟಿಗಳಿಗೆ ತಲುಪಿದೆ.

ಒಟ್ಟಾರೆ ವರಮಾನ ₹ 36,039 ಕೋಟಿಗಳಿಂದ ₹ 37,522 ಕೋಟಿಗಳಿಗೆ ಏರಿಕೆಯಾಗಿದೆ. ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣ ಶೇ 1.42 ರಿಂದ ಶೇ 0.81ಕ್ಕೆ ಇಳಿಕೆಯಾಗಿದೆ ಎಂದು ಬ್ಯಾಂಕ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT