ನವದೆಹಲಿ: 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ದೇಶದ ಖಾಸಗಿ ವಲಯದ ಅತಿದೊಡ್ಡ ಬ್ಯಾಂಕ್ ಆದ ಎಚ್‌ಡಿಎಫ್‌ಸಿ ಬ್ಯಾಂಕ್, ₹ 17,616 ಕೋಟಿ ನಿವ್ವಳ ಲಾಭ ಗಳಿಸಿದೆ.
2023–24ನೇ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹ 16,512 ಕೋಟಿ ಲಾಭ ಗಳಿಸಲಾಗಿತ್ತು. ಈ ಲಾಭದ ಪ್ರಮಾಣಕ್ಕೆ ಹೋಲಿಸಿದರೆ ಶೇ 6.6ರಷ್ಟು ಹೆಚ್ಚಳವಾಗಿದೆ ಎಂದು ಬ್ಯಾಂಕ್, ಶನಿವಾರ ಷೇರುಪೇಟೆಗೆ ತಿಳಿಸಿದೆ.
ಮಾರ್ಚ್ ತ್ರೈಮಾಸಿಕದಲ್ಲಿ ₹ 89,488 ಕೋಟಿ ವರಮಾನ ಗಳಿಸಿದೆ. ಪ್ರತಿ ಷೇರಿಗೆ ₹ 22 ಲಾಭಾಂಶ ನೀಡುವ ಬ್ಯಾಂಕ್‌ನ ಆಡಳಿತ ಮಂಡಳಿಯು ಅನುಮೋದನೆ ನೀಡಿದೆ.
ವಸೂಲಾಗದ ಸಾಲದ ಸರಾಸರಿ ಪ್ರಮಾಣವು ಶೇ 1.24ರಿಂದ ಶೇ 1.33ಕ್ಕೆ ಹೆಚ್ಚಳವಾಗಿದೆ. ನಿವ್ವಳ ಎನ್‌ಪಿಎ ಶೇ 0.33ರಿಂದ ಶೇ 0.43ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.