ನವದೆಹಲಿ: ದ್ವಿಚಕ್ರ ವಾಹನ ತಯಾರಿಕ ಕಂಪನಿ ಹೀರೊ ಮೋಟೊಕಾರ್ಪ್ ವಾಹನಗಳ ಮಾರಾಟವು ಫೆಬ್ರುವರಿಯಲ್ಲಿ ಶೇ 17ರಷ್ಟು ಕುಸಿದಿದ್ದು, 3.88 ಲಕ್ಷ ವಾಹನಗಳು ಮಾರಾಟವಾಗಿವೆ.
ಹಿಂದಿನ ವರ್ಷದ ಇದೇ ತಿಂಗಳಲ್ಲಿ 4.68 ಲಕ್ಷ ವಾಹನಗಳು ಮಾರಾಟವಾಗಿದ್ದವು ಎಂದು ಕಂಪನಿ ಸೋಮವಾರ ತಿಳಿಸಿದೆ.
ದೇಶೀಯ ಮಾರುಕಟ್ಟೆಯಲ್ಲಿ 3.57 ಲಕ್ಷ ವಾಹನಗಳು ಮಾರಾಟವಾಗಿದ್ದರೆ, 30,772 ವಾಹನಗಳು ರಫ್ತು ಆಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.