ನವದೆಹಲಿ: ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಜನವರಿಯಿಂದ ತನ್ನ ಎಲ್ಲಾ ಮಾದರಿಯ ಕಾರುಗಳ ಬೆಲೆಯನ್ನು ಶೇ 2ರಷ್ಟು ಹೆಚ್ಚಿಸಲು ನಿರ್ಧರಿಸಿದೆ.
ಉತ್ಪಾದನೆ ಮತ್ತು ಸಾಗಣೆ ವೆಚ್ಚದಲ್ಲಿ ಏರಿಕೆಯಾಗಿದೆ. ಇದನ್ನು ಸರಿದೂಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದು ಗ್ರಾಹಕರ ಮೇಲೆ ಅಲ್ಪ ಪ್ರಮಾಣದಲ್ಲಿ ಪರಿಣಾಮ ಬೀರಲಿದೆ ಎಂದು ಕಂಪನಿಯ ಉಪಾಧ್ಯಕ್ಷ (ಮಾರುಕಟ್ಟೆ ಮತ್ತು ಮಾರಾಟ) ಕುನಾಲ್ ಬೆಹ್ಲ್ ತಿಳಿಸಿದ್ದಾರೆ.
ಈಗಾಗಲೇ ಮಾರುತಿ ಸುಜುಕಿ, ಹುಂಡೈ ಮತ್ತು ಟಾಟಾ ಮೋಟರ್ಸ್ ಹೊಸ ವರ್ಷದಿಂದ ಕಾರುಗಳು ಬೆಲೆ ಏರಿಕೆ ಮಾಡುವುದಾಗಿ ಪ್ರಕಟಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.